anaamikamathu

Author Archive

ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ – ಕನ್ನಡದ ಕವಿರತ್ನಗಳು by Adarsha A.

In KANNADA on July 21, 2014 at 8:17 am

ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ – ಕನ್ನಡದ ಕವಿರತ್ನಗಳು

 
 
 
 
 

 

 
2 Votes

 

Jnanpeeth Awardees from Karnataka

ದ್ರಾವಿಡ ಭಾಷೆಗಳಲ್ಲಿ ಬಹಳ ಹಳೆಯದರಲ್ಲಿ ಒಂದಾದ ಕನ್ನಡ ಭಾಷೆ/ನುಡಿಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ ಜನರು ಆಡುನುಡಿಯಾಗಿ ಬಳಸುತ್ತಿದ್ದಾರೆ. ಕನ್ನಡ ಭಾಷೆಯಲ್ಲಿ ಎಲ್ಲ ರಸಗಳ ಭಾವನೆಗಳನ್ನು ವ್ಯಕ್ತಪಡಿಸಲು ಸಾಮರ್ಥ್ಯವಿದೆ. ಜನಪದ ಸಾಹಿತ್ಯ ದಿಂದ ಹಿಡಿದು ತತ್ವಜ್ಞಾನ, ವಿಶ್ವಕೋಶ ದಿಂದ ಹಿಡಿದು ವಿಮರ್ಶೆಯವರಿಗೆ, ಎಲ್ಲ ರೀತಿಯ ಸಾಹಿತ್ಯ ಪ್ರಕಾರಗಳನ್ನು ನಮ್ಮಲಿ ಕಾಣಬಹುದು. ಕನ್ನಡ ಬೇರೆ ಭಾಷೆಗಳಂತೆ ಜನಸಂಖ್ಯೆಯ ಆದಾರದ ಮೇಲೆ ಉಳಿದುಕೊಂಡಿಲ್ಲ. ಕನ್ನಡಕ್ಕೆ ತನ್ನದೇ ಆದ ಘನತೆ, ವ್ಯಾಕರಣದ ಶ್ರೇಷ್ಠತೆ, ಉಚ್ಚಾರಣೆಯಲ್ಲಿ ಸರಳತೆ, ಶಬ್ದಕೋಶದ ಸಂವೃಧತೆ ಇದೆ. ಆದರೆ ಕಳೆದ ಕೆಲ ವರ್ಷಗಳಿಂದ ನಮ್ಮ ಭಾಷೆ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಉಳಿದಿಲ್ಲ. ನಮ್ಮ ಭಾಷೆಯಲ್ಲದೆ ಪರಕೀಯ ಭಾಷೆಯನ್ನೇ ಹೆಚ್ಚು ಬಳಸುವ ನಾವುಗಳು ನಮ್ಮ ಭಾಷೆಯ ಅವನತಿಗೆ ನೇರವಾಗಿ ಕಾರಣರಾಗುತ್ತಿದ್ದೇವೆ. ಈವರೆಗೆ ಕನ್ನಡ ಸಾಹಿತಿಗಳು ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದು ಕನ್ನಡವನ್ನು ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಆದರೆ ದುರಂತ ನೋಡಿ ಇನ್ನೂ ಅದೆಷ್ಟೋ ಜನಕ್ಕೆ ಈ ವಿಷಯವೇ ತಿಳಿದಿಲ್ಲ. ವಿಷಯ ತಿಳಿದಿದ್ದರೂ ಕವಿಗಳ ಬಗೆಗೆ ಅವರ ಕೊಡುಗೆಯ ಬಗೆಗೆ ಅಷ್ಟಾಗಿ ಮಾಹಿತಿ ಇರುವುದಿಲ್ಲ, ಮಾಹಿತಿ ಸಿಕ್ಕರೆ ಓದುವ ಆಸಕ್ತಿಯೇ ಇರುವುದಿಲ್ಲ. ಅದೇಕೋ ನಮ್ಮ ಕವಿಗಳ ಬಗೆಗೆ ಒಂದು ಸಮಗ್ರ ಲೇಖನ ಬರೆಯೋಣ ಎನಿಸಿತು. ಬರೆದಿದ್ದೇನೆ.

ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಛ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ರಚಿಸಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಈ ಪ್ರಶಸ್ತಿಯನ್ನು ಮೇ ೨೨ ೧೯೬೧ ರಲ್ಲಿ ಸ್ಥಾಪಿಸಲಾಯಿತು. ಈ ಪ್ರಶಸ್ತಿಯನ್ನು ಪ್ರಪ್ರಥಮವಾಗಿ ೧೯೬೫ ರಲ್ಲಿ ಮಲೆಯಾಳಂ ಲೇಖಕ ಜಿ. ಶಂಕರ ಕುರುಪರಿಗೆ ಪ್ರದಾನ ಮಾಡಲಾಯಿತು. ವಿಜೇತರಿಗೆ ಪ್ರಶಸ್ತಿ ಫಲಕ, ಐದು ಲಕ್ಷ ರುಪಾಯಿ ನಗದು ಹಾಗು ವಾಗ್ದೇವಿಯ ಕಂಚಿನ ವಿಗ್ರಹವನ್ನು ನೀಡಿ ಗೌರವಿಸಲಾಗುವುದು. ೧೯೮೨ ರಿಂದ, ಈ ಪ್ರಶಸ್ತಿಯನ್ನು ಭಾರತದ ಸಾಹಿತ್ಯಕ್ಕೆ ಸಮಗ್ರ ಕೊಡುಗೆಯನ್ನು ನೀಡಿದ ಲೇಖಕರಿಗೆ ಸಂದಾಯವಾಗುತ್ತಿದೆ. ಕನ್ನಡದಲ್ಲಿ ಇದುವರೆಗೆ ಎಂಟು ಸಾಹಿತ್ಯ ರತ್ನರು ಜ್ಞಾನಪೀಠ ಪ್ರಶಸ್ತಿ ಯನ್ನು ಪಡೆದಿದ್ದರೆ.

ಕುವೆಂಪು – ಕುಪ್ಪಳ್ಳಿ ವೆಂಕಟಪ್ಪ ಗೌಡ ಪುಟ್ಟಪ್ಪ (ಡಿಸೆಂಬರ್ ೨೯೧೯೦೪ – ನವೆಂಬರ್ ೧೧೧೯೯೪) :

KUVEMPU

ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದ ಪ್ರಪ್ರಥಮ ವ್ಯಕ್ತಿ. ‘ವಿಶ್ವ ಮಾನವ’ ಪರಿಕಲ್ಪನೆಯನ್ನೂ ಸಾಹಿತ್ಯದ ಮೂಲಕ ಸಮಾಜಕ್ಕೆ ತಲುಪಿಸಿದವರು. ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ. ಕುವೆಂಪುರವರ ವೊದಲ ಕಾವ್ಯನಾಮ-”ಕಿಶೋರ ಚಂದ್ರವಾಣಿ”. ನಂತರ ಅವರು ಕುವೆಂಪು ಕಾವ್ಯನಾಮ ಬಳಸಿ ಬರೆಯ ತೊಡಗಿದರು. ಡಿಸೆಂಬರ್ ೨೯ರಂದು ಚಿಕ್ಕಮಗಳೂರು ಜಿಲ್ಲೆಯಕೊಪ್ಪ ತಾಲೂಕಿನ ಹಿರೇಕೊಡಿಗೆಯಲ್ಲಿ ಜನಿಸಿದ ಇವರು, ಕುಪ್ಪಳ್ಳಿ ಹಾಗೂ ಮೈಸೂರಿನಲ್ಲಿ ಬೆಳೆದರು. ಮೈಸೂರಿನ ‘ಮಹಾರಾಜಾ’ ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪ ಕುಲಪತಿಯಾಗಿ ನಿವೃತ್ತರಾದರು. ಇವರು ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ “ಉದಯರವಿ”ಯಲ್ಲಿ ವಾಸಿಸುತ್ತಿದ್ದರು. ಇವರ ಹೆಂಡತಿಯ ಹೆಸರು ಹೇಮಾವತಿ ಮತ್ತು ಇವರಿಗೆ ನಾಲ್ಕು ಜನ ಮಕ್ಕಳು (ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿ ಚಿದಾನಂದ).

ವಿಶ್ವ ಮಾನವ ಸಂದೇಶ :  ನಿಮಗೆ ಅನಿಸಬಹುದು ಕವಿಪರಿಚಯದ ನಡುವೆ ಈ ವಿಶ್ವ ಮಾನವ ತತ್ವ ಯಾಕಿದೆ ಅಂತ. ಆದರೆ ಒಂದು ಬಾರಿ ಇದನ್ನ ಓದಿ ನೋಡಿ. ಪ್ರತಿಯೊಬ್ಬನು ಓದಲೇ ಬೇಕಾದ, ತಿಳಿಯಬೇಕಾದ, ಜೀವನದಲ್ಲಿ ಅಳವಡಿಸಬೇಕಾದ ವಿಷಯಗಳು ಇದರಲ್ಲಿ ಅಡಕವಾಗಿವೆ. ಪ್ರತಿಯೊಂದು ಮಗುವೂ ಹುಟ್ಟುತ್ತಲೇ ವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ‘ವಿಶ್ವಮಾನವ’ನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು. ಹುಟ್ಟುವಾಗ ‘ವಿಶ್ವಮಾನವ’ನಾಗಿಯೆ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಮತ, ಜಾತಿ, ಜನಾಂಗ, ವರ್ಣ ಇತ್ಯಾದಿ ಉಪಾಧಿಗಳಿಂದ ಬಂಧಿಯನ್ನಾಗಿ ಮಾಡುತ್ತೇವೆ. ಅವೆಲ್ಲವು ಗಳಿಂದ ಪಾರಾಗಿ ಅವನನ್ನು ‘ಬುದ್ಧ’ನನ್ನಾಗಿ, ಅಂದರೆ ವಿಶ್ವ ಮಾನವನನ್ನಾಗಿ ಪರಿವರ್ತಿಸುವುದೇ ನಮ್ಮ ವಿದ್ಯೆ, ಸಂಸ್ಕೃತಿ, ನಾಗರೀಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಪ್ರಪಂಚದ ಮಕ್ಕಳೆಲ್ಲ ‘ಅನಿಕೇತನ’ರಾಗಬೇಕು, ಲೋಕ ಉಳಿದು, ಬಾಳಿ ಬದುಕಬೇಕಾದರೆ! ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಸಂಭವಿಸಿ ಹೋಗಿದ್ದಾರೆ. ಅವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊಂಡು ಕಡೆಗೆ ಮತವಾಗಿ ಪರಿಣಮಿಸಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆಂಬ ಉದ್ದೇಶದಿಂದ ಹುಟ್ಟಿ ಕೊಂಡ ಮಹಾತ್ಮರವಾಣಿ ಮತವಾಗಿ ಪರಿವರ್ತಿತವಾಯಿತು. ಒಂದು ಯುಗಕ್ಕೆ ಅಗತ್ಯವೆನಿಸಿದ ಧರ್ಮ ಕಾಲಾನುಕಾಲಕ್ಕೆ ಮತವಾಗಿ ನಿರುಪಯುಕ್ತವೆನಿಸಿ ಮತ್ತೊಂದು ಹೊಸ ಧರ್ಮಕ್ಕೆ ಎಡೆಗೊಟ್ಟುದೂ ಉಂಟು. ಹೀಗಾಗಿ ಅನೇಕ ಧರ್ಮಗಳು ಮತಗಳಾಗಿ ಜನತೆಯನ್ನು ಗುಂಪು ಗುಂಪಾಗಿ ಒಡೆದಿವೆ. ಯುದ್ದಗಳನ್ನು ಹುಟ್ಟು ಹಾಕಿವೆ. ಜಗತ್ತಿನ ಕ್ಷೋಭೆ ಗಳಿಗೆಲ್ಲ ಮೂಲ ಕಾರಣವೆಂಬಂತೆ ! ವಿಜ್ಞಾನಯುಗದ ಪ್ರಾಯೋಗಿಕ ದೃಷ್ಟಿಗೆ ಇನ್ನು ಮೇಲೆ ಮತ ಮೌಢ್ಯ ಒಪ್ಪಿಗೆಯಾಗದು. ವಿನೋಬಾ ಭಾವೆಯವರು ಹಿಂದೆ ಹೇಳಿದಂತೆ ‘ಮತ ಮತ್ತು ರಾಜಕೀಯದ ಕಾಲ ಆಗಿಹೋಯಿತು. ಇನ್ನೇನಿದ್ದರೂ ಆಧ್ಯಾತ್ಮ ಮತ್ತು ವಿಜ್ಞಾನದ ಕಾಲ ಬರಬೇಕಾಗಿದೆ.’

ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ
ಈ ಪಂಚಮಂತ್ರ ಇನ್ನು ಮುಂದಿನ ದೃಷ್ಟಿಯಾಗಬೇಕಾಗಿದೆ. ಅಂದರೆ, ನಮಗೆ ಇನ್ನು ಬೇಕಾದುದು ಆ ಮತ ಈ ಮತ ಅಲ್ಲ ; ಮನುಜ ಮತ. ಆ ಪಥ ಈ ಪಥ ಅಲ್ಲ ; ವಿಶ್ವಪಥ. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸಮಸ್ತರ ಉದಯ. ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ ; ಸಮನ್ವಯಗೊಳ್ಳುವುದು. ಮಿತ ಮತದ ಆಂಶಿಕ ದೃಷ್ಟಿಯಿಂದ ಕಾಣುವ ಪೂರ್ಣದೃಷ್ಟಿ. ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅಂತಹ ಭಾವನೆ ಅಂತಹ ದೃಷ್ಟಿ ಬರಿಯ ಯಾವುದೋ ಒಂದು ಜಾತಿಗೆ, ಮತಕ್ಕೆ, ಗುಂಪಿಗೆ, ಒಂದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಸರ್ವಕಾಲಕ್ಕೂ ಅನ್ವಯವಾಗುವ ಇವು ಮೂಲ ಮೌಲ್ಯಗಳು. ಈ ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತ ನಡೆದಾವು. ಗುಂಪುಗಾರಿಕೆಗೆಂದೂ ಇವು ತೊಡಗುವುದಿಲ್ಲ ; ಅದೇನಿದ್ದರೂ ರಾಜಕೀಯದ ಕರ್ಮ. ವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿಯೂ ಸಮಷ್ಟಿಯ ಉದ್ಧಾರದ ದೃಷ್ಟಿ ಇದರದು. ಈ ದೃಷ್ಟಿಗೆ ವ್ಯಕ್ತಿಗಳೆಷ್ಟೊ ಅಷ್ಟೂ ಸಂಖ್ಯೆಯ ಮತಗಳಿರುವುದು ಸಾಧ್ಯ ; ಅಷ್ಟೂ ವ್ಯಕ್ತಿಗಳು ಸಮಷ್ಟಿಯ ವಿಕಾಸಕ್ಕೆ ಸಾಧಕವಾಗುವುದೂ ಸಾಧ್ಯ. ಈ ‘ದರ್ಶನ’ವನ್ನೆ ‘ವಿಶ್ವಮಾನವ ಗೀತೆ’ ಸಾರುತ್ತದೆ.

  • “ಮನುಷ್ಯಜಾತಿ ತಾನೊಂದೆ ವಲಂ”ಎ೦ಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು.
  • ವರ್ಣಾಶ್ರಮವನ್ನು ತಿದ್ದುವುದಲ್ಲ, ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು. ಅಂದರೆ ಬ್ರಾಹ್ಮಣ, ಕ್ಷತ್ರಿಯ, ವ್ಯೆಶ್ಯ, ಶೂದ್ರ, ಅಂತ್ಯಜ, ಷಿಯಾ, ಸುನ್ನಿ, ಕ್ಯಾಥೊಲಿಕ್, ಪ್ರಾಟೊಸ್ಟಂಟ್, ಸಿಕ್, ನಿರಂಕಾರಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು.
  • ಎಲ್ಲಾ ದೇಶಗಳಲ್ಲಿ ಮತ್ತು ಎಲ್ಲಾ ಮತಗಳಲ್ಲಿರುವ ಜಾತಿ ಪದ್ದತಿಯನ್ನು ಸಂಪೂರ್ಣವಾಗಿ ನಿರಾಕರಿಸಿ, ಸರ್ವನಾಶಗೊಳಿಸಬೇಕು.
  • ‘ಮತ’ ತೊಲಗಿ ‘ಆಧ್ಯಾತ್ಮ’ ಮಾತ್ರ ವೈಜ್ಞಾನಿಕ ತತ್ವವಾಗಿ ಮಾನ್ಯತೆ ಪಡೆಯಬೇಕು.
  • ಮತ ‘ಮನುಜಮತ’ವಾಗಬೇಕು; ಪಥ ‘ವಿಶ್ವಪಥ’ವಾಗಬೇಕು; ಮನುಷ್ಯ ‘ವಿಶ್ವಮಾನವ’ನಾಗಬೇಕು.
  • ಮತ ಗುಂಪು ಕಟ್ಟುವ ವಿಷಯವಾಗಬಾರದು. ಯಾರೂ ಯಾವ ಒಂದು ಮತಕ್ಕೂ ಸೇರದೆ, ಪ್ರತಿಯೊಬ್ಬನೂ ತಾನು ಕಂಡು ಕೊಳ್ಳುವ ‘ತನ್ನ’ ಮತಕ್ಕೆ ಮಾತ್ರ ಸೇರಬೇಕು. ಅಂದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸಂಖ್ಯೆಯ ಮತಗಳಿರುವಂತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗುಂಪುಕಟ್ಟಿ ಜಗಳ ಹಚ್ಚುವಂತಾಗಬಾರದು.
  • ಯಾವ ಒಂದು ಗ್ರಂಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು.

ಗೌರವಗಳು ಮತ್ತು ಪ್ರಶಸ್ತಿಗಳು

ದ.ರಾ.ಬೇಂದ್ರೆ – ದತ್ತಾತ್ರೇಯ ರಾಮಚಂದ್ರ ಬೇಂದ್ರೆ (೧೮೯೬ ಜನವರಿ ೩೧- ೧೯೮೧ ಅಕ್ಟೋಬರ ೨೬:

da ra bendre

ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ – ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ “ಕೃಷ್ಣ ಕುಮಾರಿ”-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.

ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. ೧೯೮೧ರ ಅಕ್ಟೋಬರ್‌ನಲ್ಲಿ ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು. ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ“, “ಕಾಮಕಸ್ತೂರಿ“, “ಸೂರ್ಯಪಾನ“, “ನಾದಲೀಲೆ“, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ “ಗೆಳೆಯರ ಗುಂಪು” ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು. ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಏರಿದ್ದ ಸಮಯ.ಬೇಂದ್ರೆ ಯವರ “ಗರಿ” ಕವನ ಸಂಕಲನದಲ್ಲಿನ “ನರಬಲಿ” ಎಂಬ ಕವನವು ಆಗಿನ ಬ್ರಿಟಿಷ್ ಸರ್ಕಾರದ ಕೋಪಕ್ಕೆ ಕಾರಣವಾಯಿತು. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು.

ನಾಡಿನ ತುಂಬೆಲ್ಲಾ ನಡೆದಾಡಿದ ಅವರಲ್ಲಿರುವಂತ ಪ್ರತಿಯೊಂದು ಸಾಹಿತ್ಯದ ನುಡಿಗಳು ಮಾನವನ ನಾಡಿ ಮಿಡಿತದಂತೆ ಹರಿದಾಡಿ ಇಡೀ ಕನ್ನಡ ಸಾಹಿತ್ಯ ರಂಗವನ್ನೆ ಶ್ರೀಮಂತಗೊಳಿಸಿವೆ ಎಂದರೆ ತಪ್ಪಲಾಗಲಾರದು. ಇಡೀ ಜೀವನದ ತುಂಬಾ ನಿಸ್ವಾರ್ಥ ಸೇವೆಯನ್ನು ಗೈದ “ಧಾರವಾಡದ ಅಜ್ಜ” ಅವರ ಕೆಲವೊಂದು ಮಕ್ಕಳ ಕವಿತೆ, ಕತೆಗಳು ಮಕ್ಕಳ ಮನಸ್ಸನ್ನು ಪರಿವರ್ತಿಸುತ್ತವೆ.

ಗೌರವಗಳು ಮತ್ತು ಪ್ರಶಸ್ತಿಗಳು

 ಶ್ರೀ ಕೋಟ ಶಿವರಾಮ ಕಾರಂತ (ಅಕ್ಟೋಬರ ೧೦, ೧೯೦೨ – ಡಿಸೆಂಬರ್ ೯, ೧೯೯೭) :

kota shivarama karanta

ಜ್ಞಾನಪೀಠ ಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ ಕಮ್ಮಿ ಬಾಳಿ, ಅರ್ಥಪೂರ್ಣ ಬದುಕು ಕಳೆದ ಸಾಹಿತ್ಯ ದಿಗ್ಗಜ ಡಾ. ಶಿವರಾಮ ಕಾರಂತರು ೧೯೯೭, ಡಿಸೆಂಬರ್ ೦೯ ರಂದು ನಿಧನ ಹೊಂದಿದರು. ತಮ್ಮ ಜೀವಿತಾವಧಿಯಲ್ಲಿ ಸುಮಾರು ೪೨೭ ಪುಸ್ತಕಗಳನ್ನು ರಚಿಸಿದರು. ಅವುಗಳಲ್ಲಿ ಕಾದಂಬರಿಗಳು ೪೭. ತಮ್ಮ ೯೬ನೆಯ ವಯಸ್ಸಿನಲ್ಲೂ ಹಕ್ಕಿಗಳ ಕುರಿತು ಒಂದು ಪುಸ್ತಕವನ್ನು ಬರೆದಿದ್ದು, ಇದು ವಿಶ್ವ ದಾಖಲೆಗೆ ಅರ್ಹವಾಗಿರುವ ಒಂದು ಸಾಧನೆ ಎನ್ನಬಹುದು.

ಸಾಹಿತಿಯಾಗಿ ಶಿವರಾಮ ಕಾರಂತರು ಪ್ರಸಿದ್ಧಿಯಾಗಿರುವಂತೆ, ಇತರ ಕ್ಷೇತ್ರಗಳಲ್ಲೂ ಅಪಾರ ಸಾಧನೆ ಮಾಡಿದವರು. ಕರ್ನಾಟಕದ ಪ್ರಮುಖ ಕಲೆಯಾದ ಯಕ್ಷಗಾನದ ಉಳಿವಿಗೆ ಪ್ರಯತ್ನಿಸಿ, ಅದರಲ್ಲಿ ಹಲವು ಪ್ರಯೋಗಗಳನ್ನು ಮಾಡಿದ್ದರು. ತಾವೇ ಸ್ವತಃ ನೃತ್ಯವನ್ನು ಕಲಿತು, ಬ್ಯಾಲೆಯಲ್ಲೂ ಗಂಭೀರ ಪ್ರಯೋಗ ಮತ್ತು ಪ್ರಯತ್ನ ಮಾಡಿದ್ದರು. ಯುವಕರಾಗಿದ್ದಾಗ, ಸಮಾಜ ಸುಧಾರಣೆಗೂ ಕೈ ಹಾಕಿ, ವೇಶ್ಯಾ ವಿವಾಹಗಳನ್ನು ಮಾಡಿಸಿದ್ದರು! ಯಕ್ಷಗಾನ ತಂಡಗಳನ್ನು ಕಟ್ಟಿಕೊಂಡು ದೇಶ ವಿದೇಶಗಳಲ್ಲಿ ಈ ಕಲೆಯನ್ನು ಪ್ರಚುರಪಡಿಸಲು ಯತ್ನಿಸಿದರು.ಮಕ್ಕಳಲ್ಲಿದ್ದ ಪ್ರತಿಭೆ ಅರಳಿಸಲು ಪುತ್ತೂರಿನಲ್ಲಿ ಬಾಲವನ ಎಂಬ ಅಸಂಪ್ರದಾಯಿಕ ಶೈಕ್ಷಣಿಕ ಕೇಂದ್ರವನ್ನು ತೆರೆದಿದ್ದರು. ಪುತ್ತೂರಿನಲ್ಲಿ ಒಂದು ಮುದ್ರಣಾಲಯ ತೆರೆದು, ತಮ್ಮ ಪುಸ್ತಕಗಳನ್ನು ಮುದ್ರಿಸುತ್ತಿದ್ದರಲ್ಲದೆ, ತಮ್ಮ ಹಲವು ಕಾದಂಬರಿಗಳಿಗೆ ತಾವೆ ಮುಖಪುಟದ ಚಿತ್ರಗಳನ್ನೂ ಬರೆದು ಮುದ್ರಿಸಿದ ಬಹುಮುಖ ಪ್ರತಿಭೆ ಇವರದ್ದು! ಬಹುಶಃ ಮುಖಪುಟ ಚಿತ್ರ ಬರೆದು ಪ್ರಕಟಿಸಿದ ಕನ್ನಡದ ಪ್ರಮುಖ ಸಾಹಿತಿ ಇವರೊಬ್ಬರೇ. ನಿರಂತರ ಪ್ರಯೋಗಶೀಲರಾಗಿದ್ದ ಕೋಟ ಶಿವರಾಮ ಕಾರಂತ ಅವರು ಕನ್ನಡ ಚಿತ್ರರಂಗದಲ್ಲಿ ಕೂಡ ತಮ್ಮ ಪ್ರಯೋಗವನ್ನು ಆರಂಭ ಮಾಡಿದ್ದು. ಮೂಕಿ ಚಿತ್ರ ನಿರ್ಮಾಣಕ್ಕೆ ಕೈಹಾಕುವ ಮೂಲಕ .ಹರಿಜನರ ಬದುಕನ್ನು ಆಧರಿಸಿದ್ದ ಡೊಮಿಂಗೋ (೧೯೩೦) ಚಿತ್ರವನ್ನು ತಾವೇ ಚಿತ್ರೀಕರಿಸಿ, ಅಭಿನಯಿಸಿ ನಿರ್ದೇಶಿಸಿದ್ದರು. ಅನಂತರ ಭೂತರಾಜ್ಯ (೧೯೩೧) ಎಂಬ ಮೂಕಿ ಚಿತ್ರಗಳನ್ನು ಸಹ ನಿರ್ಮಿಸಿದರು.

ಪರಿಸರ ಹೋರಾಟ: ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ಜ್ಞಾನಪೀಠಪದ್ಮಭೂಷಣಪಂಪ ಪ್ರಶಸ್ತಿನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ “ಕಾರಂತಜ್ಜ” ಆಗಿದ್ದರು. ವಿಶ್ವಪ್ರೇಮಿ ಹಾಗೂ ಮಹಾಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.

ಗೌರವಗಳು ಮತ್ತು ಪ್ರಶಸ್ತಿಗಳು

ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬೧೮೯೧ – ಜೂನ್ ೬೧೯೮೬) :

Maasthi Venkatesa Iyengar

ಮಾಸ್ತಿ  ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು. ಮಾಸ್ತಿ ವೆಂಕಟೇಶ ಅಯ್ಯಂಗಾರರು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಜೂನ್ ೬ ೧೮೯೧ ರಲ್ಲಿ ಜನಿಸಿದರು. ಮೆಟ್ರಿಕ್ಯುಲೇಷನ್(೧೯೦೭), ಎಫ್ ಎ (೧೯೦೯), ಬಿ ಎ (ಮದರಾಸು ವಿಶ್ವವಿದ್ಯಾಲಯ ೧೯೧೨), ಮೈಸೂರು ಸಿವಿಲ್ ಸರ್ವಿಸ್ (೧೯೧೩), ಎಂ.ಎ (ಮದರಾಸು ವಿಶ್ವವಿದ್ಯಾಲಯ ೧೯೧೪) ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ, ೧೯೧೪ ರಲ್ಲಿ ಮೈಸೂರು ಸರ್ಕಾರದಲ್ಲಿ ಅಸಿಸ್ಟೆಂಟ್ ಕಮಿಷನರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ೧೯೧೪ ರಿಂದ ೧೯೪೩ ರವವರೆಗೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿ ನಿವೃತ್ತರಾದರು. ೧೯೨೦ ರಲ್ಲಿ ಅವರ ಮೊದಲ ಪುಸ್ತಕ ಕೆಲವು ಸಣ್ಣ ಕಥೆಗಳು ಪ್ರಕಟಗೊಂಡಿತು. ಸಣ್ಣ ಕತೆ, ನೀಳ್ಗತೆ, ಕಾದಂಬರಿ, ಕಾವ್ಯ, ನಾಟಕ, ಜೀವನ ಚರಿತ್ರೆ, ಪ್ರಬಂಧ, ವಿಮರ್ಶೆ, ಸಂಪಾದನೆ, ಅನುವಾದ – ಹೀಗೆ ಕನ್ನಡ ಸಾಹಿತ್ಯದ ಪ್ರತಿಯೊಂದು ಕ್ಷೇತ್ರಕ್ಕೂ ತಮ್ಮ ಕೊಡುಗೆಯನ್ನು ನೀಡಿದ್ದಾರೆ. ೧೯೮೩ ರಲ್ಲಿ ಚಿಕವೀರ ರಾಜೇಂದ್ರ ಕಾದಂಬರಿಗಾಗಿ ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡ ಮಾಸ್ತಿಯವರು ಕನ್ನಡಕ್ಕೆ ನಾಲ್ಕನೆ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟರು. ಜೀವನ ಪರ್ಯಂತ ಕನ್ನಡ ಸೇವೆಯನ್ನು ಮಾಡಿದ ಮಾಸ್ತಿಯವರು ಜೂನ್ ೬ ೧೯೮೬ ರಂದು ನಿಧನ ಹೊಂದಿದರು.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಎಂಬ ಹಳ್ಳಿಯಲ್ಲಿ ೧೮೯೧ರ ಜೂನ್ ೬ರಂದು ಹುಟ್ಟಿದರು. ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾರ್ “ಪೆರಿಯಾತ್” ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು. ಅವರ ಹಿರಿಯರು ಬಹು ಜನಕ್ಕೆ ಅನ್ನ ಹಾಕಿ ಹೆಸರು ಗಳಿಸಿದ್ದರಾದರೂ ಅವರು ವಾರದ ಮನೆಗಳಲ್ಲಿ ಊಟಮಾಡಿ ವಿದ್ಯಾಭ್ಯಾಸ ಮಾಡಬೇಕಾಯಿತು. ಹೊಂಗೇನಳ್ಳಿ, ಯಲಂದೂರು, ಶಿವಾರಪಟ್ಟಣ, ಮಳವಳ್ಳಿಮೈಸೂರು, ಕಡೆಗೆ ಮದರಾಸು ಹೀಗೆ ನಾನಾ ಕಡೆಗಳಲ್ಲಿ ತಮ್ಮ ಬಂಧುಗಳ ನೆರವಿನಿಂದ ವಿದ್ಯಾಭ್ಯಾಸ ಮಾಡಿ ಎಂ.ಎ. ಪದವಿ ಗಳಿಸಿದರು. ತಮ್ಮ ವಿದ್ಯಾಭ್ಯಾಸ ಕಾಲದಲ್ಲಿ ಮಾಸ್ತಿ ಯಾವ ಪರೀಕ್ಷೆಯಲ್ಲೂ ಪ್ರಥಮ ಸ್ಥಾನವನ್ನು ಬೇರೆಯವರಿಗೆ ಬಿಟ್ಟುಕೊಡಲಿಲ್ಲ. ಮದ್ರಾಸಿನಲ್ಲಿ ಇಂಗ್ಲೀಷ್ ಎಂ.ಎ. ಮಾಡಿಕೊಂಡು ಚಿನ್ನದ ಪದಕ ಗಳಿಸಿದ ಮಾಸ್ತಿ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸುಮಾರು ಒಂದೂವರೆ ತಿಂಗಳು ಉಪಾಧ್ಯಾಯರಾಗಿದ್ದು ಬೆಂಗಳೂರಿಗೆ ಬಂದು ಸಿವಿಲ್ ಪರೀಕ್ಷೆಗೆ ಕುಳಿತು ಅಲ್ಲಿಯೂ ಪ್ರಥಮರಾಗಿ ತೇರ್ಗಡೆಯಾದರು. ಸರ್ಕಾರದಲ್ಲಿ ಅಸಿಸ್ಟೆಂಟ್ ಕಮೀಶನರಾಗಿ ಕೆಲಸಕ್ಕೆ ಸೇರಿ ಸಮರ್ಪಕವಾಗಿ ಕೆಲಸ ನಿರ್ವಹಿಸಿದರು. ಸಾಹಿತ್ಯ ರಚನೆ ಅವರ ಪ್ರವೃತ್ತಿಯಾಗಿ ಬೆಳೆಯಿತು.

ಗೌರವಗಳು ಮತ್ತು ಪ್ರಶಸ್ತಿಗಳು

ವಿ.ಕೃ.ಗೋಕಾಕ – ವಿನಾಯಕ ಕೃಷ್ಣ ಗೋಕಾಕ್  (೧೯೦೯ ಆಗಸ್ಟ್ ೯ – ೧೯೯೨ ಏಪ್ರಿಲ್ ೨೮) :

V K Gokak

ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ತಮ್ಮ ಹಲವು ಸಾಧನೆ, ಸಿದ್ಧಿಗಳಿಂದ ಕನ್ನಡಕ್ಕೆ ಅಂತಾರಾಷ್ಟ್ರೀಯ ಖ್ಯಾತಿಯನ್ನೂ, ಗೌರವವನ್ನೂ ತಂದು ಕೊಟ್ಟ ವಿನಾಯಕ ಕೃಷ್ಣರಾವ್ ಗೋಕಾಕರು ೧೯೦೯ರ ಅಗಸ್ಟ್.೯ರಂದು ಅವಿಭಜಿತ ಧಾರವಾಡ ಜಿಲ್ಲೆಯ ಸವಣೂರು ಎಂಬಲ್ಲಿ ಜನಿಸಿದರು. ಅವರ ತಂದೆ ಕೃಷ್ಣರಾಯರು ವಕೀಲರಾಗಿದ್ದರು. ವಿನಾಯಕರು ಹುಟ್ಟಿದ ಕಾಲಕ್ಕೆ ಸವಣೂರು ಒಂದು ಪುಟ್ಟ ಸಂಸ್ಥಾನವಾಗಿತ್ತು. ಒಬ್ಬ ನವಾಬನ ಆಡಳಿತಕ್ಕೆ ಒಳಪಟ್ಟಿತ್ತು. ವಿನಾಯಕರ ವಿದ್ಯಾಭ್ಯಾಸ ಸವಣೂರು ಧಾರವಾಡಗಳಲ್ಲಿ ನಡೆಯಿತು. ಹೀಗೆ ವಿದ್ಯಾಭ್ಯಾಸದ ಸಲುವಾಗಿ ಧಾರವಾಡದಲ್ಲಿದ್ದಾಗಲೇ ಅವರಿಗೆ ಕನ್ನಡದ ವರಕವಿ ಬೇಂದ್ರೆಯವರಸಂಪರ್ಕ ಒದಗಿ ಬಂತು. ಗೋಕಾಕರ ಸಾಹಿತ್ಯ ಕೃಷಿ ಬೇಂದ್ರೆಯವರ ಮಾರ್ಗದರ್ಶನ, ಪ್ರೋತ್ಸಾಹಗಳಿಂದ ಮುಂದುವರೆಯಿತು. ಬೇಂದ್ರೆ ತಮ್ಮ ಕಾವ್ಯ ಗುರುವೂ, ಮಾರ್ಗದರ್ಶಕರೂ ಆಗಿದ್ದರೆಂದು ಗೋಕಾಕರೇ ಹೇಳಿಕೊಂಡಿದ್ದಾರೆ. ಇಂಗ್ಲೀಷ್ ವಿಷಯದ ಎಂ.ಎ. ಪರೀಕ್ಷೆಯಲ್ಲಿ ಮೊದಲ ದರ್ಜೆಯಲ್ಲಿ ಉತ್ತೀರ್ಣರಾದ ಗೋಕಾಕರು, ಕೂಡಲೇ ಪುಣೆಯ ಫರ್ಗ್ಯೂಸನ್ ಕಾಲೇಜಿನಲ್ಲಿ ಉಪನ್ಯಾಸಕ ಹುದ್ದೆಗೆ ಆಯ್ಕೆಯಾದರು. ಅವರು ತಮ್ಮ ವೃತ್ತಿಯಲ್ಲಿ ತಮ್ಮನ್ನು ಪೂರ್ತಿಯಾಗಿ ತೊಡಗಿಸಿಕೊಂಡರು.ಇದರ ಫಲವಾಗಿ ಕನ್ನಡದ ಗಂಡುಮೆಟ್ಟಿನ ನೆಲದ ಈ ಯುವಕ ಮರಾಠಿಗರನ್ನು ಕೂಡ ತಮ್ಮ ಕಡೆ ಸೆಳೆದುಕೊಂಡ. ಇವರ ತರಗತಿಗಳಿಗೆ ಬೇರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಕೂಡ ಪಾಠ ಕೇಳಲು ಬರುತ್ತಿದ್ದರಂತೆ.

ಇವರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಫರ್ಗ್ಯೂಸನ್ ಕಾಲೇಜಿನ ಆಡಳಿತ ವರ್ಗವೇ ಹೆಚ್ಚಿನ ವಿದ್ಯಾಭ್ಯಾಸಕ್ಕೆಂದು ಇವರನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಕ್ಕೆ ಕಳಿಸಿತು. ಗೋಕಾಕರು ಆಕ್ಸ್‌ಫರ್ಡ್‌ನಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಓದಿದರು. ಪರೀಕ್ಷೆಯನ್ನು ಮೊದಲ ದರ್ಜೆಯಲ್ಲಿ ಪಾಸು ಮಾಡಿದರು. ಹೀಗೆ ಆಕ್ಸ್‌ಫರ್ಡ್‌ನಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಪ್ರಥಮ ದರ್ಜೆಯಲ್ಲಿ ಪಾಸು ಮಾಡಿದ ಮೊದಲ ಭಾರತೀಯ ಎಂಬ ಕೀರ್ತಿಗೆ ಪಾತ್ರರಾದರು. ಇಂಗ್ಲೆಂಡಿನಿಂದ ಹಿಂತಿರುಗಿ ಬಂದವರಿಗೆ ಸಾಂಗ್ಲಿಯ ವಿಲ್ಲಿಂಗ್ಡನ್ ಕಾಲೇಜಿನ ಪ್ರಿನ್ಸಿ ಪಾಲರ ಹುದ್ದೆ ಕಾದಿತ್ತು. ಅನಂತರ ಕ್ರಮೇಣ ಅವರು ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಾಪಕನಾದವನೊಬ್ಬನು ಏರಬಹುದಾದ ಅತ್ಯುನ್ನತ ಹುದ್ದೆಯಾದ ಉಪಕುಲಪತಿ ಹುದ್ದೆಗೂ ಏರಿದರು. ಅವರು ಸಾಂಗ್ಲಿಯ ವಿಲ್ಲಿಂಗ್‌ಡನ್ ಕಾಲೇಜು, ಪುಣೆಯ ಫರ್ಗೂಸನ್ ಕಾಲೇಜು, ವೀಸನಗರದ ಕಾಲೇಜು, ಕೊಲ್ಲಾಪುರದ ರಾಜಾರಾಮ ಕಾಲೇಜು, ಧಾರವಾಡದ ಕರ್ನಾಟಕ ಕಾಲೇಜು,ಉಸ್ಮಾನಿಯಾ ವಿಶ್ವವಿದ್ಯಾಲಯಹೈದರಾಬಾದ್ ಹೈದರಾಬಾದಿನಲ್ಲಿರುವ ಇಂಗ್ಲೀಷ್ ಮತ್ತು ವಿದೇಶೀ ಭಾಷೆಗಳ ಕೇಂದ್ರ ಸಂಸ್ಥೆ, ಸಿಮ್ಲಾ ಸಿಮ್ಲಾದಲ್ಲಿರುವ ಉನ್ನತ ಅಧ್ಯಯನ ಸಂಸ್ಥೆ -ಮೊದಲಾದ ಶಿಕ್ಷಣ ಸಂಸ್ಥೆಗಳಲ್ಲಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು. ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಶ್ರೀಸತ್ಯಸಾಯಿ ಉನ್ನತ ಅಧ್ಯಯನ ಸ್ಥೆಯ ಉಪಕುಲಪತಿಗಳಾಗಿದ್ದರು. ಜಪಾನ್ಅಮೆರಿಕಇಂಗ್ಲೆಂಡ್ಬೆಲ್ಜಿಯಂಗ್ರೀಸ್, ಪೂರ್ವ ಆಫ್ರಿಕ ಮೊದಲಾದ ದೇಶಗಳಿಗೆ ಭಾರತದ ಸಾಂಸ್ಕೃತಿಕ ರಾಯಭಾರಿಯಾಗಿ ಹೋಗಿ ಬಂದರು. ತಮ್ಮ ಬದುಕಿನುದ್ದಕ್ಕೂ ಕನ್ನಡದ ಕೀರ್ತಿಪತಾಕೆಗಳನ್ನು ದೇಶದ ಒಳಗೂ ಹೊರಗೂ ಹಾರಿಸಿದ ಗೋಕಾಕರು ೧೯೯೨ರ ಎಪ್ರಿಲ್.೨೮ರಂದು ಬೆಳಗಿನ ಜಾವ ಮುಂಬಯಿಯಲ್ಲಿನಿಧನರಾದರು.

ಗೌರವಗಳು ಮತ್ತು ಪ್ರಶಸ್ತಿಗಳು

ಗೋಕಾಕರು ಸಾಹಿತ್ಯ-ಸಂಸ್ಕೃತಿಗೆ ಸಲ್ಲಿಸಿದ ಸೇವೆಯನ್ನು ಗಮನಿಸಿ ಜನತೆಯೂ, ಸರ್ಕಾರವೂ ಅವರಿಗೆ ಪ್ರಶಸ್ತಿ ಗೌರವಗಳನ್ನು ನೀಡಿ ಸನ್ಮಾನಿಸಿವೆ. ಬಳ್ಳಾರಿಯಲ್ಲಿ ೧೯೫೮ರಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು. ೧೯೬೭ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ೧೯೭೯ರಲ್ಲಿ ಕ್ಯಾಲಿಫೋರ್ನಿಯಾದ ಫೆಸಿಫಿಕ್ ವಿಶ್ವವಿದ್ಯಾಲಯಗಳು ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿವೆ. ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿದೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪದವಿ ಮತ್ತು ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಪದವಿ ಇವೆರಡೂ ಕನ್ನಡಿಗರೊಬ್ಬರಿಗೆ ಮೊದಲ ಬಾರಿಗೆ ಸಂದ ಗೌರವಗಳಾಗಿವೆ. ಅವರ ಮೇರು ಕೃತಿ “ಭಾರತ ಸಿಂಧು ರಶ್ಮಿ”ಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಭಾರತೀಯ ವಿದ್ಯಾಭವನದ ರಾಜಾಜಿ ಪ್ರಶಸ್ತಿ ಮತ್ತು ಐ.ಬಿ.ಎಚ್. ಪ್ರಶಸ್ತಿಗಳೂ ದೊರಕಿವೆ. ಗೋಕಾಕರ “ದ್ಯಾವಾ ಪೃಥಿವೀ” ಕವನ ಸಂಕಲನಕ್ಕೆ ೧೯೬೦ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಬಂದಿತು. ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡುವಾಗ ಪ್ರಶಸ್ತಿ ಆಯ್ಕೆ ಸಮಿತಿ ಅವರ ಯಾವುದೇ ಕೃತಿಯನ್ನು ಹೆಸರಿಸಲಿಲ್ಲ. ಕನ್ನಡ ಸಾಹಿತ್ಯ ಲೋಕಕ್ಕೆ ಅವರು ೧೯೬೯ರಿಂದ ೧೯೮೪ರ ಅವಧಿಯಲ್ಲಿ ನೀಡಿದ ಅನುಪಮ ಕೊಡುಗೆಯನ್ನು ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಹೇಳಿದೆ. ಯಾವುದೇ ಕೃತಿಯನ್ನು ಹೆಸರಿಸದೆ ಜ್ಞಾನಪೀಠ ಪ್ರಶಸ್ತಿ ಕೊಟ್ಟಿದ್ದು ಇದೇ ಮೊದಲು. ಆದರೆ ಬಹಳ ಜನರು ಗೋಕಾಕರಿಗೆ ಅವರ ಮೇರು ಕೃತಿ “ಭಾರತ ಸಿಂಧು ರಶ್ಮಿ”ಗಾಗಿಯೇ ಈ ಪ್ರಶಸ್ತಿ ಬಂದಿದೆ ಎಂದು ಭಾವಿಸಿದ್ದಾರೆ.

ಯು.ಆರ್.ಅನಂತಮೂರ್ತಿ (೧೯೩೨ರ ಡಿಸೆಂಬರ್ ೨೧) :

U. R. Ananthamurthy

ಕನ್ನಡಕ್ಕೆ ಆರನೆಯ ಜ್ಞಾನಪೀಠ ಪ್ರಶಸ್ತಿ ೧೯೯೪ರಲ್ಲಿ ಬಂದಾಗ ಕನ್ನಡ ಸಾಹಿತ್ಯ ಲೋಕ ಮತ್ತೊಮ್ಮೆ ಇಡೀ ದೇಶದ ಗಮನ ಸೆಳೆಯಿತು. ಈ ಗೌರವ ಪಡೆದವರು ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ. ಎಲ್ಲರಿಗೂ ಅವರವರ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಅತ್ಯಗತ್ಯ ಎಂದು ಬಲವಾಗಿ ಪ್ರತಿಪಾದಿಸುವ ಅನಂತಮೂರ್ತಿ; ವಿದೇಶಗಳ ಹಲವಾರು ಭಾಷೆ ತಿಳಿದಿರುವ ನಮಗೆ ನಮ್ಮ ಅಕ್ಕಪಕ್ಕದ ನಾಡಿನ ಭಾಷೆಗಳು ಗೊತ್ತೇ ಇಲ್ಲದ್ದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸುತ್ತಾರೆ. ಜಗತ್ತಿನ ಬೇರೆ ಬೇರೆ ಭಾಷೆಗಳ ಹಲವು ಮಹತ್ವದ ಕೃತಿಗಳು ಇಂಗ್ಲೀಷಿಗೆ ಸಮರ್ಥವಾಗಿ ಅನುವಾದಗೊಳ್ಳಲು ಸಾಧ್ಯವಿಲ್ಲ ಎನ್ನುವುದ ಅವರ ಅಭಿಪ್ರಾಯವಾಗಿದೆ. ಕನ್ನಡ ಸಾಹಿತಿಯೂ ಮತ್ತು ಭಾರತೀಯ ಸಾಹಿತ್ಯದ ವಿಮರ್ಶಕರೂ ಆದ ಅನಂತಮೂರ್ತಿ ತಮ್ಮನ್ನು ಕನ್ನಡ ಸಂಸ್ಕೃತಿಯ Critical Insider ಎಂದು ಕರೆದುಕೊಳ್ಳುತ್ತಾರೆ. ತಮ್ಮ ಬಹುಚರ್ಚಿತ ಸಂಸ್ಕಾರ ಕಾದಂಬರಿಯಿಂದ ಭಾರತೀಯ ಸಾಹಿತ್ಯ ಮತ್ತು ಚಲನಚಿತ್ರ ರಂಗಗಳಲ್ಲಿ ಒಂದು ದೊಡ್ಡ ವಿವಾದವನ್ನೇ ಮಾಡಿದ ಅನಂತಮೂರ್ತಿ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಹಳ್ಳಿಯಲ್ಲಿ. ಇಬ್ಬರು ಜ್ಞಾನಪೀಠ ಪ್ರಶಸ್ತಿ ವಿಜೇತ (ಕುವೆಂಪು ಮತ್ತು ಅನಂತಮೂರ್ತಿ) ರನ್ನು ನೀಡಿದ ಹೆಗ್ಗಳಿಕೆ ತೀರ್ಥಹಳ್ಳಿ ತಾಲ್ಲೂಕಿನದು. ಇವರು ಹುಟ್ಟಿದ್ದು ೧೯೩೨ರ ಡಿಸೆಂಬರ್ ೨೧ರಂದು. ತಂದೆ ಉಡುಪಿ ರಾಜಗೋಪಾಲಾಚಾರ್ಯ. ತಾಯಿ ಸತ್ಯಮ್ಮ (ಸತ್ಯಭಾಮ).

೧೯೬೫ರಲ್ಲಿ ಇವರ ಮೊದಲ ಕಾದಂಬರಿ “ಸಂಸ್ಕಾರ” ಪ್ರಕಟವಾಯಿತು. ಪ್ರಕಟವಾದಾಗ ಮತ್ತು ಚಲನಚಿತ್ರವಾದಾಗ ತುಂಬ ವಿವಾದವನ್ನುಂಟು ಮಾಡಿದ ಈ ಕಾದಂಬರಿ ಹಲವಾರು ದೇಶೀಯ ಮತ್ತು ವಿದೇಶೀಯ ಭಾಷೆಗಳಿಗೆ ಅನುವಾದಗೊಂಡಿದೆ. ಭಾರತೀಪುರ, ಅವಸ್ಥೆ ಮತ್ತು ಭವ -ಇವರ ಇತರ ಕಾದಂಬರಿಗಳು. “ಆವಾಹನೆ” ಎಂಬ ಒಂದು ನಾಟಕವನ್ನು ಬರೆದಿರುವ ಅನಂತಮೂರ್ತಿ “೧೫ ಪದ್ಯಗಳು”, “ಮಿಥುನ” ಮತ್ತು “ಅಜ್ಜನ ಹೆಗಲ ಸುಕ್ಕುಗಳು” ಎಂಬ ಮೂರು ಕವನ ಸಂಕಲನಗಳನ್ನೂ ಪ್ರಕಟಿಸಿದ್ದಾರೆ. ಪ್ರಜ್ಞೆ ಮತ್ತು ಪರಿಸರ, ಪೂರ್ವಾಪರ, ಸಮಕ್ಷಮ -ಇವು ಅವರ ಪ್ರಬಂಧ ಸಂಕಲನಗಳು. ಇಷ್ಟಲ್ಲದೆ ಇಂಗ್ಲೀಷಿನಲ್ಲಿ ಇವರು ಬರೆದಿರುವ ಹಲವಾರು ಪ್ರಬಂಧಗಳು ದೇಶ-ವಿದೇಶಗಳ ಸಾಹಿತ್ಯಕ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ೧೯೮೧ರಲ್ಲಿ ರಾಜಕೀಯ, ಸಾಂಸ್ಕೃತಿಕ ಮತ್ತು ಸಾಹಿತ್ಯಕ ವಿಷಯಗಳಿಗೆಂದು “ರುಜುವಾತು” ಎಂಬ ತ್ರೈಮಾಸಿಕ ಪತ್ರಿಕೆಯನ್ನು ಪ್ರಾರಂಭಿಸಿದರು.

ಗೌರವಗಳು ಮತ್ತು ಪ್ರಶಸ್ತಿಗಳು

ಸಂಸ್ಕಾರ, ಘಟಶ್ರಾದ್ಧ ಮತ್ತು ಬರ ಚಿತ್ರಗಳಿಗೆ ಅತ್ಯುತ್ತಮ ಕತೆಗಾಗಿ ಅನಂತಮೂರ್ತಿಯವರಿಗೆ ಪ್ರಶಸ್ತಿ ಸಿಕ್ಕಿದೆ. ೧೯೮೩ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೮೪ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,೧೯೯೨ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೯೪ರಲ್ಲಿ ಮಾಸ್ತಿ ಪ್ರಶಸ್ತಿ -ಇವು ಅನಂತಮೂರ್ತಿಯವರಿಗೆ ಬಂದ ಮನ್ನಣೆಗಳಲ್ಲಿ ಕೆಲವು. ೧೯೯೪ರಲ್ಲಿ ಬಂದಿರುವ ಜ್ಞಾನಪೀಠ ಪ್ರಶಸ್ತಿ ಇವೆಲ್ಲವುಗಳಿಗೆ ಕಳಶಪ್ರಾಯವಾದುದು.

ಗಿರೀಶ್ ರಘುನಾಥ್ ಕಾರ್ನಾಡ್ (ಮೇ ೧೯೧೯೩೮) :

Girish Karnad

ಕನ್ನಡಕ್ಕೆ ಏಳನೇ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟಕನ್ನಡ ಸಾಹಿತ್ಯದ ನಾಟಕ ಕ್ಷೇತ್ರದ ಸಾಹಿತಿ. ಭಾರತದಲ್ಲೇ ನಾಟಕ ಸಾಹಿತ್ಯ ರಚನೆಗೆ ಜ್ಞಾನಪೀಠ ಪ್ರಶಸ್ತಿ ಪಡೆದವರಲ್ಲಿ ಕಾರ್ನಾಡ್ ಮೊದಲಿಗರು. ಈಗಾಗಲೇ ಇಬ್ಬರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕಾದಂಬರಿಗಳನ್ನು ಸಿನಿಮಾ ಮಾಡಿದ ಏಕೈಕ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರೆಂಬ ಗೌರವಕ್ಕೆ ಕಾರ್ನಾಡ್ ಪಾತ್ರರಾಗಿದ್ದಾರೆ. ಕಾರ್ನಾಡ್ ಅವರಿಗೆ ಪ್ರಶಸ್ತಿ ಬಂದಾಗ ಸೌಜನ್ಯದಿಂದಲೇ ಮರಾಠಿಯ ವಿಜಯ ತೆಂಡೂಲ್ಕರ್ ಅವರಂಥವರಿಗೆ ಈ ಪ್ರಶಸ್ತಿ ಬರಬೇಕಿತ್ತು ಎಂದು ಹೇಳಿ ದೊಡ್ಡತನ ಮೆರೆದಿದ್ದರು. ಕನ್ನಡದಲ್ಲಿ ನಾಟಕ ರಚಿಸುತ್ತ ಇತರ ಭಾರತೀಯ ಭಾಷೆಗಳಲ್ಲಿ ಸಂಪರ್ಕವಿಟ್ಟುಕೊಂಡು ಸಾಂಸ್ಕೃತಿಕ ವಕ್ತಾರರಾದ ಕಾರ್ನಾಡ್ ನಟರಾಗಿ, ನಿರ್ದೇಶಕರಾಗಿ ಹೆಸರಾಗಿದ್ದಾರೆ. ಆರಂಭದಲ್ಲಿ ರಂಗಭೂಮಿ ನಟರಾಗಿದ್ದವರು ಹೊಸ ವಿಚಾರಗಳತ್ತ ಗಮನ ಹರಿಸಿ ನಾಟಕ ರಚನೆಗೆ ಚಿಂತಿಸಿದರು. ಹೀಗಾಗಿ ಪುರಾಣ, ಇತಿಹಾಸಗಳು ವಾಸ್ತವ ನೆಲೆಗಟ್ಟಿನಲ್ಲಿ ನೇಯಲ್ಪಟ್ಟವು. 

ಇಂಗ್ಲೆಂಡಿಗೆ ತೆರಳುವ ಮೊದಲೆ ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ ಯಯಾತಿ ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟ ವಾಯಿತು. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಈ ನಡುವೆ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್‍ನ ನಿರ್ದೇಶಕ ರಾಗಿದ್ದು, ಮತ್ತೆ ಅದನ್ನು ಬಿಟ್ಟು ಮುಂಬಯಿಗೆ ಬಂದ ಕಾರ್ನಾಡರು ಕೆಲವು ಚಲನ ಚಿತ್ರಗಳಲ್ಲಿ ನಟಿಸಿದರು. ಆ ರಂಗವನ್ನೂ ತ್ಯಜಿಸಿ ಮತ್ತೆ ಬೆಂಗಳೂರಿಗೆ ಬಂದರು. ಅಲ್ಲಿಂದ ರಚಿತವಾದ ಅವರ ನಾಟಕಗಳುಅಂಜುಮಲ್ಲಿಗೆ, ನಾಗಮಂಡಲ, ತಲೆದಂಡ ಹಾಗೂ ಅಗ್ನಿ ಮತ್ತು ಮಳೆ.

ಗೌರವಗಳು ಮತ್ತು ಪ್ರಶಸ್ತಿಗಳು

  • ಜ್ಞಾನಪೀಠ ಪ್ರಶಸ್ತಿ – ಸಮಗ್ರ ಸಾಹಿತ್ಯ(೧೯೯೮ )
  • ಕರ್ನಾಟಕ ವಿಶ್ವವಿದ್ಯಾಲಯ ಕಾರ್ನಾಡರ ಸಾಹಿತ್ಯ-ಸಿನಿಮಾ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. “ಕಾರ್ನಾಡರು ವಸ್ತುವನ್ನು ಗ್ರಹಿಸುವ ಕ್ರಮದಲ್ಲೇ ಅವರ ಅನನ್ಯತೆ ಇದೆ. ಈ ಗ್ರಹಿಕೆಗೆ ಪೂರಕವಾದ ರಚನಾಕ್ರಮವನ್ನು ಅವರು ಕಂಡುಕೊಂಡಿದ್ದಾರೆ. ಒಂದು ಸಮಸ್ಯೆಯನ್ನು ನಾಟಕ ರೂಪಕ್ಕೆ ಒಗ್ಗಿಸಿಕೊಂಡು ಅದಕ್ಕೊಂದು structure ಕೊಟ್ಟು ಜನರ ಮುಂದಿಡುವುದರಲ್ಲೇ ನಾಟಕಕಾರನ ಸೋಲು ಗೆಲುವು ಎರಡೂ ಅಡಗಿದೆ.” ಎಂದು ಕಾರ್ನಾಡರ ನಾಟಕಗಳ ವಸ್ತು, ಗ್ರಹಿಕೆ ಬಗ್ಗೆ ಭಾರತೀಯ ರಂಗಭೂಮಿಯ ಹಿರಿಯ ನಿರ್ದೇಶಕ ಬಿ. ವಿ. ಕಾರಂತರು ದಾಖಲಿಸುತ್ತಾರೆ.
  • ಕಾರ್ನಾಡರಿಗೆ ಹಲವಾರು ಹುದ್ದೆಗಳು, ಪ್ರಶಸ್ತಿಗಳು ಲಭಿಸಿವೆ.ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,
  • ಗುಬ್ಬಿ ವೀರಣ್ಣ ಪ್ರಶಸ್ತಿ
  • ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ
  • ಪ್ರತಿಷ್ಠಿತ ಪದ್ಮಶ್ರೀ
  • ಪದ್ಮಭೂಷಣ
  • ಕಾರ್ನಾಡ್ ಕೇಂದ್ರ ಸಂಗೀತ-ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
  • ಇಂಗ್ಲೆಂಡ್‌ನಲ್ಲಿ ನೆಹರು ಸೆಂಟರ್‌ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
  • ೨೦೦೮ -೦೯ ರ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಮಂಡಳಿ ಘೋಷಿಸಿದ್ದ ” ಪುಟ್ಟಣ್ಣ ಕಣಗಾಲ್ “ಪ್ರಶಸ್ತಿಯನ್ನು ಪ್ರಶಸ್ತಿಯನ್ನು ಗಿರೀಶ್ ಕಾರ್ನಾಡ್ ನಿರಾಕರಿಸಿದ್ದಾರೆ .
  • ಅವರ ಜೀವಮಾನದ ಸಾಧನೆಗಾಗಿ ಕೆ.ಎಸ್.ಆರ್.ದಾಸ್ ಅವರಿಗೆ ನೀಡಲಾಗಿದ್ದ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಕೆಲ ಕ್ಷಣಗಳಲ್ಲಿಯೇ ಹಿಂದಕ್ಕೆ ಪಡೆದು ಅದನ್ನು ಗಿರೀಶ್ ಕಾರ್ನಾಡ್ ಅವರಿಗೆ ನೀಡಲಾಗಿತ್ತು.(ದಾಸ್ ಅವರಿಗೆ ಪ್ರಶಸ್ತಿ ನೀಡಿದ್ದನ್ನು ಘೋಷಿಸಿದ ಕೂಡಲೆ “ಕೆ.ಎಸ್.ಆರ್.ದಾಸ್” ಅವರು ಕನ್ನಡ ಚಿತ್ರರಂಗಕ್ಕೆ ಹೆಚ್ಚಿನ ಸೇವೆ ಸಲ್ಲಿಸಿಲ್ಲವೆಂಬುದು ಪತ್ರಕರ್ತರಿಂದ ಪ್ರತಿಭಟನೆ ವ್ಯಕ್ತವಾಗಿದ್ದರಿಂದ ಅದನ್ನು ಕೂಡಲೆ ಹಿಂದೆ ಪಡೆದು ಅದನ್ನು ಕಾರ್ನಾಡ್ ಅವರಿಗೆ ಭಾರ್ಗವ ನೀಡಿದ್ದರು.

ಡಾ. ಚಂದ್ರಶೇಖರ ಕಂಬಾರ (೨ ಜನವರಿ ೧೯೩೭) :

Chandrashekhara Kambara

ಡಾ. ಚಂದ್ರಶೇಖರ ಕಂಬಾರ ೧೯೩೭ರಂದು ಬೆಳಗಾವಿ ಜಿಲ್ಲೆ ಘೋಡಿಗೇರಿ ಗ್ರಾಮದಲ್ಲಿ ಬಸವಣ್ಣೆಪ್ಪ ಕಂಬಾರ ಹಾಗೂ ಚೆನ್ನಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಗೋಕಾಕ್ ನ ಮುನ್ಸಿಪಲ್ ಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದರು. ಬಳಿಕ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಬಿಎ ಪದವಿ, ೧೯೬೨ರಲ್ಲಿ ‘ಕರ್ನಾಟಕ ವಿವಿ’ಯಿಂದ ಎಂ.ಎ ಪದವಿ ಹಾಗೂ ಪಿ.ಎಚ್.ಡಿ.ಪದವಿ ಪಡೆದಿದ್ದಾರೆ. ಬೆಂಗಳೂರು ವಿಶ್ವವಿದ್ಯಾನಿಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ವೊದಲ ಕುಲಪತಿಯಾಗಿ ಡಾ. ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ.೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಚಿಕಾಗೊ, ನ್ಯೂಯಾರ್ಕ್, ಬರ್ಲಿನ್, ಮಾಸ್ಕೋ, ಜಪಾನ್ ಮುಂತಾದೆಡೆಗಳ ಕೆಲವು ವಿ.ವಿ.ಗಳಲ್ಲಿ ಜಾನಪದ ಮತ್ತು ರಂಗಭೂಮಿ ಕುರಿತ ಉಪನ್ಯಾಸಗಳನ್ನು ನೀಡಿರುವ ಹೆಗ್ಗಳಿಕೆ ಇವರದು.

ಕಂಬಾರರು ಯುವಕರಾಗಿದ್ದಾಗ ಧಾರವಾಡದ ಕವಿ ಸಮ್ಮೇಳನದಲ್ಲಿ ಕವಿತೆಯೊಂದನ್ನು ಓದಿದ್ದರಂತೆ, ಖ್ಯಾತ ಕವಿಗಳೊಬ್ಬರು ಅಧ್ಯಕ್ಷತೆ ವಹಿಸಿದ್ದರು, ಕಂಬಾರರ ಕವಿತೆ ಅಲ್ಲಿ ಓದಿದ ಎಲ್ಲ ಕವಿಗಳಿಗಿಂತ ಭಿನ್ನವಾಗಿದ್ದದ್ದು ಎಲ್ಲರ ಗಮನಕ್ಕೆ ಬಂದಿದ್ದರೂ, ಅದ್ಯಕ್ಷರು ಕಂಬಾರರ ಬಗ್ಗೆ ಕುಹಕದ ಮಾತು ಹೇಳಿದ್ದರು, “ಕಬ್ಬಿಣ ಕಾಸುವವರೂ ಈಗ ಕಾವ್ಯ ಬರೆಯುತ್ತಿದ್ದಾರೆ ” ಎಂಬ ಅಧ್ಯಕ್ಷರ ಮಾತು ಕಂಬಾರರ ಸ್ವಾಭಿಮಾನವನ್ನೇ ಬಡಿದೆಬ್ಬಿಸಿತು, ಅಂದೇ ಕಂಬಾರ ಕಾವ್ಯವನ್ನು ಪಳಗಿಸಿಕೊಳ್ಳಲು ನಿರ್ಧರಿಸಿದರಂತೆ. ಜಾನಪದ ಸೊಗಡನ್ನು ತಮ್ಮ ಬರವಣಿಗೆಯಲ್ಲಿ ಮೈದಾಳಿಸಿಕೊಂಡು ಬಂದಿರುವ ಚಂದ್ರಶೇಖರ ಕಂಬಾರರು ಹಲವು ಪ್ರತಿಭೆಗಳ ಸಂಗಮ. ಕವಿನಾಟಕಕಾರಸಂಗೀತ ನಿರ್ದೇಶಕಚಲನಚಿತ್ರ ನಿರ್ದೇಶಕಅಧ್ಯಾಪಕ, ಜಾನಪದ ತಜ್ಞ, ದಕ್ಷ ಆಡಳಿತಗಾರ ಇತ್ಯಾದಿ.

ಗೌರವಗಳು ಮತ್ತು ಪ್ರಶಸ್ತಿಗಳು

  • ಜ್ಞಾನಪೀಠ ಪ್ರಶಸ್ತಿ – ಸಮಗ್ರ ಸಾಹಿತ್ಯ(೨೦೧೦)
  • ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಕಂಬಾರರು ೧೯೯೧ರಲ್ಲಿ ತಮ್ಮ `ಸಿರಿಸಂಪಿಗೆ’ ನಾಟಕಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದಾರೆ.
  • ೨೦೦೧ ರಲ್ಲಿ ಪದ್ಮಶ್ರೀ ಪ್ರಶಸ್ತಿ.
  • ೨೦೦೪ರಲ್ಲಿ ಕನ್ನಡ ವ್ವಿಶ್ವ ವಿದ್ಯಾಲಯದಿಂದ ನಾಡೋಜ ಪ್ರಶಸ್ತಿ .
  • ಕೇರಳದ ಕುಮಾರನ್‌ ಆಶಾನ್‌ ಪ್ರಶಸ್ತಿ.
  • ಮಧ್ಯ ಪ್ರದೇಶ ಸರ್ಕಾರ ನೀಡುವ ಕಾಳಿದಾಸ ಸಮ್ಮಾನ್ ಪ್ರಶಸ್ತಿ
  • “ಜೋಕುಮಾರಸ್ವಾಮಿ” ೧೯೭೫ರ ಭಾರತೀಯ ಭಾಷೆಯ ಅತ್ಯುತ್ತಮ ನಾಟಕ – ಕಮಲಾದೇವಿ ಚಟ್ಟೋಪಾಧ್ಯಾಯ ಪ್ರಶಸ್ತಿ.
  • ರಾಜ್ಯ ಸಾಹಿತ್ಯ ಅಕಾಡೆಮಿ ಜೆರೋವಾ ಪ್ರಶಸ್ತಿಗಳು ಬಂದಿವೆ
  • ಶಿಖರ ಸೂರ್ಯ ಕೃತಿಗೆ ಟ್ಯಾಗೋರ್‌ ಪ್ರಶಸ್ತಿ,
  • ೨೦೦೨ರಲ್ಲಿ ಕಬೀರ್ ಸಮ್ಮಾನ್ ಪ್ರಶಸ್ತಿ ದೊರೆತಿದೆ,
  • ಆಳ್ವಾಸ್ ನುಡಿಸಿರಿ-೨೦೦೬ರ ಸಮ್ಮೇಳನದ ಅಧ್ಯಕ್ಷರಾಗಿದ್ದರು.
  • ಇವರು ೨೦೦೪ ರಿಂದ ೨೦೧೦ರವರೆಗೆ ವಿಧಾನಪರಿಷತ್ ಸದಸ್ಯರಾಗಿದ್ದರು.
  • ಚಂದ್ರಶೇಖರ ಕಂಬಾರರಿಗೆ ೨೦೧೦ರ ಸಾಲಿನ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಇವರು ಜ್ಞಾನಪೀಠ ಪ್ರಶಸ್ತಿ ಪಡೆದ ೮ ನೇ ಕನ್ನಡಿಗರಾಗಿದ್ದಾರೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ

ಪ್ರತಿಯೊಂದು ಮಗುವೂ ಹುಟ್ಟುತ್ತಲೆ – ವಿಶ್ವಮಾನವ. ಬೆಳೆಯುತ್ತಾ ನಾವು ಅದನ್ನು ‘ಅಲ್ಪಮಾನವ’ನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ‘ವಿಶ್ವಮಾನವ’ನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು – IT ಕನ್ನಡಿಗ

ಕ್ರೇಜಿ ಮಾಣಿಕ್ಯ – THE TRENDSETTER

In KANNADA on July 21, 2014 at 8:10 am

ಕ್ರೇಜಿ ಮಾಣಿಕ್ಯ – THE TRENDSETTER.

Bahuparak on25 th July 2014 in Kannada box office

In KANNADA on July 21, 2014 at 7:23 am

bahuparak

Bahuparak’ only one mute and got U/A certificates  and film scheduled to  release on 25th of July 2014Bahuparak is Srinagar Kitty’s 25th project in Sandalwood. film is release in 120 theater in allover Karnataka The actor will be seen in three different roles in the movie that spans three generations.The movie is directed by Suni of Simple Agi Ondu Love Story fame and stars Meghna Raj in the female lead. The actress plays double role in the film It will be interesting to watch Kitty’s performance in the film, as the actor has never tried something like this before onscreen. Bahuparak is different from any other film  both technically as well as in terms of content. The project has taken longer to finish partly due to technical issues. film finished shooting last November,

Suni is a storyteller, and Bahuparak is his dream venture.  his own creative thought. As a director, he is fabulous.

 

 

 

Kannada box office Half year Report 2014

In KANNADA on July 21, 2014 at 6:56 am

kannada box office report

 

  In  the first half of year 2014 Sandalwood saw around 72 films hitting the screens with an investment of approximately Rs 125 crore,  the film that was a Kannada box office success happened to be Sri Murali’s Uggramm,  Chiranjeevi Sarja’s Chandralekha, Sudeep’s Maanikya and Yash’s Gajakesari, . Unfortunately, the much hyped Ninnindale starring Puneeth Rajkumar too did not hit the right chord. Upendra’s Brahma managed marginal profit.

 actor Rakshit Shetty turning director with Ulidavara Kandante – a film which created much buzz before its release but could not survive for long at the theatres. 

Remakes like Maanikya, Oggarane,  Drishya. has ruled box office  The film Oggarane, which was released in three languages, Preetham Gubbi’s Dil Rangeela and P Sathya’s Shivajinagara  declared as average hit

 Major flops included Darling, Mathe Sathya Graha, Nage Bomb, Navarangi and Malli. These films could not manage to run for more than a week. 

As per reports, only the producers of the film Gajakesari have earned profit and around five to six films have got their investments back. Sadly, 80 per cent of the films were below average and did not meet the audience’s expectations.

Srimurali’s Murari on 25th July in Kannada box office

In KANNADA on July 21, 2014 at 6:40 am

images

Srimurali next flick  Muraari. High on success after ‘Ugram’, The movie will be released on 25th of July 2014. The movie has been directed by H Vasu and produced by R S Gowda. However, This movie was shot 5 years back and never got released. Riding on the success of Ugram, the producers feel that the movie will do a good business. Apart from Murali, Rashmi of Duniya fame will be seen in the movie. However the success of Ugram has revived his career in the Kannada Film Industry. It would be interesting to see if the release of a 5 year old movie will be liked by the viewers

London Indian Film Festival Ulidavaru Kandanthe International Premier on 12 th and 13 th July 2014

In KANNADA on July 8, 2014 at 6:51 am

ULIDAVARU KANDANTE | INTERNATIONAL PREMIERE | Cert 15
goopi
FILM INFO


Kannada with English subtitles | 154 mins | India |
Dir. Rakshit Shetty | with Rakshit Shetty, Kishore, Tara.

   
play trailer website


12 JULY | 18:00 | CINEWORLD WANDSWORTH Location Map Booking Info
13 JULY | 17:30 | ICA Location Map Booking Info
SYNOPSIS
This dazzling epic manages to cram in homages to Sin City, Pulp Fiction, Agneepath, Scarface, Shankar Nag,
Rashomon
and a host of other tributes while telling an utterly compelling and original story. In this kinetic
suspense thriller that deals with five interconnected stories, a journalist sets out to uncover the truth behind an incident from the past, through the perspectives of different people, and how they and their lives are intertwined with it. Along the way she encounters gangsters, fisherwomen, precocious children, tiger dancers, motor mechanics and a wide array of other colourful characters that help together in piecing together what happened one fateful night years ago. Rakshit Shetty, the star of blockbuster hit Simple Agi Ondh Love Story, makes his directorial debut with this film and also puts in a swaggering central performance where he faces off against the other rising Kannada star Kishore.

Aakramana – New Horror Kannada Film this friday in Kannada box office

In KANNADA on July 8, 2014 at 6:35 am

images

this week. The movie titled Aakramana is set for release , movie is shot is both 3D and 2D and will be the first horror movie in Kannada that is being shot in 3D. The movie is directed by Prashant Kumar. Under the banner of A1 Cinemas, producers are Suresh Jain, Vimal Jain, Paramesh and Prashant Kumar

The shooting of the movie happend in Mysore. apart from mysore film also shoot in beautiful locations of , Madikeri and Kasargod.Cinematographer  Ratheesh Kumar did the 3D and 2D photography. The music  by Sathish Aryan.  the action sequences were choreographed by K.D. Venkatesh and Rajesh Kannan. The movie stars Raghu Mukherjee as a cop. The cast includes Daisy Shah, Shilpi Sharma, Makaranda Deshpande, Avinash, Sidlingu Sridhar, Sudarshan, Ramesh Pandith, Danny Kuttapa, Marco, Prakash Shenoy, Kishori Ballal and others.

Jasmin.5 kannada box office

In KANNADA on July 6, 2014 at 10:56 am

imagesJasmin.5 is a film on ‘Nirbaya’ case of rape in New Delhi. Director Krishna with new team of actors Mohan Kumar, Navya, Manasa and others completed this film for release. It is one and half years dream coming to silver screen he says. It is not just on Delhi rape case. There are other commercial elements. In the interval and in climax there is suspense he says.

At the media meet the caption for the film ‘Dehali Devathe Durmarana Kathe’ also came up. The cruelty in the film was awarded A certificate agreed director Krishna.

Sanjeev and Sriraj have scored music for two songs each. Mohan Kumar also producer cum hero said he has two shades in acting in his debut.
The method adopted to kill the rapists in ‘Jasmin.5′ is interesting. Using the ‘Panchabuthas’ the five tormentors are finished in the film says director Krishna addressing the media. Normally after death the practice is saying immersing in ‘Panchabuthas’ (Panchabuthagalalli Leena is what said in Kannada).
In ‘Jasmin.5’ the protagonist kills the culprits of rape on Earth, Fire, Water, Air and Sky!

Rose – kannada box office

In KANNADA on July 6, 2014 at 10:52 am

imagesRose, starring Ajay Rao has released on July 4th. The movie is written and directed by Sahana Murthy H.S. and produced by Tharun Shivappa. it includes Shravya, Sadhu Kokila, Bullet Prakash, Raju Thalikote, Sudha Belwadi, Pavithra Lokesh. The movie revolves around the story of Ajai (Ajay Rao) and Amrutha (Shravya) who fall in love with each other. However their parents oppose the relationship when they come to know about it. A twist in the plot occurs and the protagonist Ajai is jailed. He then tries to escape and reunite with his lady love.
The storyline is very simple and dialogue delivery is average. First half of the movie is bland. In the second half of the movie, the story becomes interesting with the arrest of the boy. While the lead pair have tried their best, they don’t have a strong story to go about. the music of the movie has been appreciated by the audience

Jai Lalitha First Week Kannada Box office Report

In KANNADA on July 2, 2014 at 11:46 am

Image

Sharan starer ‘Jai Lalitha’ has opened to great response across Karnataka The first three days for ‘Jai Lalitha’ Kannada film by P Kumar is pretty good and in all the 150 theatres it was released by Toogudeepa Distributors recorded 90 percent collection. This is the first signal of success of the film.

The movie is made on a small budget and is sure to recover its production cost within a week. With ‘Jai Lalitha’s success, Sharan will join the list of top actors in Kannada industry.

We had series of problems in the censor, title etc. we are showing progress of 80 percent and above collection in all the 150 theatres said Arun one of the producers.

Pon Kumar for taking the credit for the story was checked by the media as he has told ‘Jai Lalitha’ is a remake of ‘Maaya Mohini’ Malayalam film. director have made several changes to the script he stated but not left out the hero becoming heroine aspect in the contents.

 

Unbiased Viewer

Movies, Politics, Books, Cricket and Exotic Foods define me...

Ramani's blog

Education Health Hinduism India Lifestyle News Science

ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ

Thejesh GN ⏚ ತೇಜೇಶ್ ಜಿ.ಎನ್

A Blog, A Website and A container for all my views with excerpts from technology, travel, films, india, photography, kannada, friends and other interests. I am Thejesh GN. Friends call me Thej

churumuri

swalpa sihi, swalpa spicy

ಗುಜರಿ ಅಂಗಡಿ

ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ

Oppanna : ಒಪ್ಪಣ್ಣನ ಬೈಲಿನ ಒಪ್ಪಂಗೊ

ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ

ಸಾನ್ವಿ ಜೊತೆಯಲಿ..(Together with Saanvi)

ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ

Follow

Get every new post delivered to your Inbox.

Join 76 other followers

%d bloggers like this: